Home ಕರಾವಳಿ ಮಂಗಳೂರು: ನಾಳೆ ‘ರೆಡ್ ಅಲರ್ಟ್’ ಹಿನ್ನೆಲೆ | ನದಿ, ಸಮುದ್ರಕ್ಕಿಳಿಯದಂತೆ ಎಚ್ಚರಿಕೆ!

ಮಂಗಳೂರು: ನಾಳೆ ‘ರೆಡ್ ಅಲರ್ಟ್’ ಹಿನ್ನೆಲೆ | ನದಿ, ಸಮುದ್ರಕ್ಕಿಳಿಯದಂತೆ ಎಚ್ಚರಿಕೆ!

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಮಂಗಳವಾರ (17-05-2022) ದಿಂದ ಗುರುವಾರ (19-05-2022) ವರೆಗೆ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ನದಿ, ಸಮುದ್ರಗಳಿಗೆ ಇಳಿಯದಂತೆ ಮೀನುಗಾರರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಸಿದೆ.

ಮೇ18 ರ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ.

ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ದಿವಸಗಳಲ್ಲಿ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ತೆರಳದಂತೆ ಸೂಚನೆ ನೀಡಿದೆ. ಅಲ್ಲದೇ, ಮೂರು ದಿನಗಳ ಕಾಲ ಸಮುದ್ರ ಮೀನುಗಾರಿಕೆಗೆ ನಿರ್ಬಂಧ ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ, ಸಮುದ್ರಗಳಿಗೆ ಇಳಿಯದಂತೆ ಜಿಲ್ಲಾಡಳಿತವು ಆದೇಶಿಸಿದೆ.

ಭಾರೀ ಮಳೆಯಿಂದಾಗಿ ನೆರೆ ಸಾಧ್ಯತೆ ಹಿನ್ನೆಲೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಸೂಚಿಸಿದ್ದಾರೆ.

ತುರ್ತು ಸೇವೆಗೆ ಟೋಲ್ ಫ್ರೀ ಕಂಟ್ರೋಲ್ ರೂಂ. ಸಂಖ್ಯೆ 1077 ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಿಳಿಸಿದೆ.

Join Whatsapp
Exit mobile version