ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್: ಮುಂದಿನ 4 ದಿನ ರಣಭೀಕರ ಮಳೆ ಸಾಧ್ಯತೆ

Prasthutha|

ಮಂಗಳೂರು: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 4 ದಿನ ರಣಭೀಕರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -


ಕೊಡಗು,ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಮೀನುಗಾರರಿಗೆ ಎಚ್ಚರಿಕೆ
ಗಾಳಿಯು ಗಂಟೆಗೆ 35 ಕಿ.ಮೀ ಇಂದ 45 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಕನ್ನಡ ಕರಾವಳಿಯಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳು ಏಳುವ ಸಾಧ್ಯತೆ ಇದೆ ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Join Whatsapp