ಮುಂದಿನ 48 ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ: ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ !

Prasthutha|

ಮಂಗಳೂರು: ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಮುಂದುವರಿದಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -


ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಜು.7 ರಿಂದ ಜು.9 ರವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮಂಗಳೂರಿನಿಂದ ಕಾರವಾರ ಸಮುದ್ರದವರೆಗೆ ಭಾರಿ ಅಲೆಗಳು ಏಳುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.


ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಜನರಿಗೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

- Advertisement -



Join Whatsapp