ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಶನಿವಾರ ಕೂಡ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಶಾಲೆ- ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಕಲಬುರ್ಗಿ, ಬೀದರ್ ನಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಮಕ್ಕಳು, ಮೀನುಗಾರರು ಮತ್ತು ಪ್ರವಾಸಿಗರು ಮುಂದಿನ ಎರಡು ದಿನಗಳ ಕಾಲ ತಗ್ಗು ಪ್ರದೇಶಗಳು ಮತ್ತು ಕಡಲತೀರಗಳಿಗೆ ಹೋಗದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಅಗತ್ಯ ಬಿದ್ದರೆ ತುರ್ತು ಕರ್ತವ್ಯ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಸಿದ್ಧರಾಗಿರುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ತಾಲೂಕಿನಲ್ಲಿ ತುರ್ತು ಸ್ಪಂದನಾ ಕೇಂದ್ರ ತೆರೆಯಲು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 2 ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.