Home ಟಾಪ್ ಸುದ್ದಿಗಳು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 15 ಮತ್ತು 16ರಂದು ರೆಡ್...

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 15 ಮತ್ತು 16ರಂದು ರೆಡ್ ಅಲರ್ಟ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 15 ಮತ್ತು 16ರಂದು ರೆಡ್ ಅಲರ್ಟ್ ನೀಡಲಾಗಿದೆ.

ಅಲ್ಲದೆ, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿಯೂ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಇಂದು, ನಾಳೆ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.

ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.

Join Whatsapp
Exit mobile version