Home ಕರಾವಳಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ನಾಳೆ ರೆಡ್​ ಅರ್ಲಟ್​

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ನಾಳೆ ರೆಡ್​ ಅರ್ಲಟ್​

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜು.9ರಂದು ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್​ ಅರ್ಲಟ್​ ಘೋಷಿಸಿದೆ.

ಪ್ರತಿ ಗಂಟೆಗೆ 55 ಕಿ.ಮೀ.ವೇಗದಲ್ಲಿ ಬೀಸುವ ಬಿರುಗಾಳಿ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ದಣ ಕನ್ನಡದ ಮೂಲ್ಕಿಯಿಂದ ಮಂಗಳೂರಿನವರೆಗೆ, ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳವರೆಗೆ, ಉಡುಪಿಯ ಬೈಂದೂರಿನ ಕಾಪುವರೆಗೆ ಹೈ ವೇವ್​ ವಾಚ್​ ಅರ್ಲಟ್​ ನೀಡಲಾಗಿದೆ. ಸಮುದ್ರದಲ್ಲಿ 3 ಮೀಟರ್​ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ದ.ಕ. ಜಿಲ್ಲೆಯಲ್ಲಿ ಪಿಯು‌ ಕಾಜೇಜಿನವರೆಗೆ ರಜೆಯನ್ನೂ ಘೋಷಿಸಲಾಗಿದೆ.

ರಾಜ್ಯಾದ್ಯಂತ ಮಳೆ ಚುರುಕುಗೊಂಡಿದ್ದು, ಆಗುಂಬೆ, ಮೂಡಗೆರೆ, ಮಂಗಳೂರು, ಹೊನ್ನಾವರ ಹಾಗೂ ಕಲಬುರಗಿ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಪ್ರಮಾಣದಲ್ಲಿ ವರ್ಷಧಾರೆಯಾಗಿದೆ.

Join Whatsapp
Exit mobile version