Home ಟಾಪ್ ಸುದ್ದಿಗಳು ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್ ನಕಾರ

ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು: ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್ ನಿರಾಕರಿಸಿದೆ.


ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಉಮೇಶ್ ರೆಡ್ಡಿ, ಅನಾರೋಗ್ಯಕ್ಕೆ ತುತ್ತಾಗಿರುವ ತಾಯಿಯೊಂದಿಗೆ ಇರಲು 30 ದಿನಗಳ ಕಾಲ ಪೆರೋಲ್ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೆರೋಲ್ ನೀಡಲು ನಿರಾಕರಿಸಿದೆ.

Join Whatsapp
Exit mobile version