ಬೆಂಗಳೂರು: ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಎಫ್ಐಆರ್ ದಾಖಲು ಕಡ್ಡಾಯ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಲಲಿತಾ ಕುಮಾರಿ ಕೇಸ್ನ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಬಗ್ಗೆ ಮಾರ್ಗಸೂಚಿ, ಸುತ್ತೋಲೆ ಹೊರಡಿಸಲು ಡಿಜಿ ಮತ್ತು ಐಜಿಪಿಗೆ ಸೂಚನೆ ನೀಡಲಾಗಿದೆ.
ಲಲಿತಾ ಕುಮಾರಿ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ತೀರ್ಪಿನ 120ನೇ ಪ್ಯಾರಾವನ್ನು ಕನ್ನಡ, ಆಂಗ್ಲ ಭಾಷೆಯಲ್ಲಿ ಸುತ್ತೋಲೆ ಹೊರಡಿಸಬೇಕು. ಎಫ್ಐಆರ್ ದಾಖಲಿಸಲು ವಿಳಂಬ ಮಾಡದಂತೆ ತಾಕೀತು ಮಾಡಲಾಗಿದೆ.
ಗಂಭೀರ ಅಪರಾಧದ ದೂರು ಬಂದಾಗ ಪ್ರಾಥಮಿಕ ತನಿಖೆ ಅಗತ್ಯವಿಲ್ಲ. ಅದೇ ರೀತಿಯಾಗಿ ಗಂಭೀರವಲ್ಲದ ಪ್ರಕರಣಗಳಲ್ಲಿ ಮಾತ್ರ ಪ್ರಾಥಮಿಕ ತನಿಖೆ ನಡೆಸಬಹುದು. 7 ದಿನದೊಳಗೆ ಪ್ರಾಥಮಿಕ ತನಿಖೆ ಮುಕ್ತಾಯಗೊಳಿಸಬೇಕು. ಗಂಭೀರ ಅಪರಾಧ ಕಂಡುಬಂದಾಗ ಎಫ್ಐಆರ್ ದಾಖಲಿಸಬೇಕು. ಪೊಲೀಸ್ ಠಾಣೆಯ ಡೈರಿಯಲ್ಲಿ ತನಿಖೆಯ ಮಾಹಿತಿ ಉಲ್ಲೇಖಿಸಬೇಕು ಎಂದು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.