Home ಟಾಪ್ ಸುದ್ದಿಗಳು ಜು.19 ರಿಂದ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ: ಲಕ್ಷ್ಮೀ ಹೆಬ್ಬಾಳ್ಕರ್

ಜು.19 ರಿಂದ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 19 ರಿಂದ ಪ್ರಾರಂಭವಾಗಲಿದೆ ಮತ್ತು ಇದಕ್ಕಾಗಿ ಅರ್ಜಿಯನ್ನು ಸಿದ್ಧಪಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.


ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಜು.17 ರಂದು (ಸೋಮವಾರ) ಗೃಹಲಕ್ಷ್ಮಿ ಯೋಜನೆ ಆ್ಯಪ್‌ ಗೆ ಚಾಲನೆ ನೀಡಲಾಗುವುದು. ಜು.19 ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆಯು ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ಪಾವತಿದಾರರಾಗಿರಬಾರದು. ಅಂತಹವರಿಗೆ ಈ ಯೋಜನೆ ಸೌಲಭ್ಯ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

Join Whatsapp
Exit mobile version