ಕೋವಿಡ್ ನಿಯಮಾವಳಿ ಗಾಳಿಗೆ ತೂರಿ ತರಗತಿ ಆರಂಭಿಸಿದ ಕಣಚೂರ್ ಮೆಡಿಕಲ್ ಕಾಲೇಜ್ !

Prasthutha: April 22, 2021

ಮಂಗಳೂರು : ಕೋವಿಡ್ ಎರಡನೇ ಅಲೆಯನ್ನೆದುರಿಸಲು ಸರಕಾರ ನಿರ್ದೇಶಿಸಿರುವ ಮಾರ್ಗಸೂಚಿಗಳನ್ನೆಲ್ಲಾ ಗಾಳಿಗೆ ತೂರಿರುವ ಮಂಗಳೂರಿನ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಯಾವುದೇ ಅಡೆ ತಡೆಯಿಲ್ಲದೆ ತರಗತಿಗಳು ಎಂದಿನಂತೆ ನಡೆಯುತ್ತಿದೆ ಎನ್ನಲಾಗಿದೆ.  ಸರಕಾರದ ಆದೇಶಗಳಿಗೆ ಸೊಪ್ಪು ಹಾಕದ ಆಡಳಿತ ಮಂಡಳಿ, ಎಂದಿನಂತೆ ನಿಗದಿತ ತರಗತಿಗಳನ್ನು ನಡೆಸುತ್ತಿದೆ.

ತರಗತಿ ನಡೆಸದಂತೆ ವಿವಿ ಕಡೆಯಿಂದ ಆದೇಶವಿದ್ರೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ತರಗತಿಗೆ ಹಾಜರಾಗುವಂತೆ ತಿಳಿಸಿದ್ದರು ಎನ್ನಲಾಗಿದೆ. ಇದಕ್ಕೆ ಸ್ಪಂದಿಸಿರುವ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದಾರೆ. ಹೆಚ್ಚಿನವರು ಕೇರಳ ಮತ್ತು ಕರ್ನಾಟಕದ ವಿದ್ಯಾರ್ಥಿಗಳಾಗಿದ್ದಾರೆ. ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ತರಗತಿಗೆ ಕರೆಯಲಾಗಿದ್ದು, ಪ್ರತಿ ತರಗತಿಗಳಲ್ಲಿ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ ಎನ್ನಲಾಗಿದೆ.

‘ಪ್ರಸ್ತುತ’ ಈ ಕುರಿತು ಪ್ರತಿಕ್ರಿಯೆ ಪಡೆಯಲು  ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕ ಅಸ್ಗರ್ ಅಲಿ ಹಾಗೂ ಕಾಲೇಜಿನ ಡೀನ್ ಸರೀತಾ ಅವರನ್ನು ಸಂಪರ್ಕಿಸುವ ಪ್ರಯತ್ನ ನಡೆಸಲಾಯಿತು. ಆದರೆ ಇಬ್ಬರೂ ಪ್ರತಿಕ್ರಿಯೆಗೆ ಲಭ್ಯರಾಗಿಲ್ಲ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!