ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ: ಶ್ರೀರಾಮುಲು

Prasthutha|

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟಿಸಿದ ಕಾರಣಕ್ಕೆ ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸರ್ಕಾರ ಆದೇಶ ನೀಡಿದೆ.ಇದರಿಂದ ಒಟ್ಟು 4200 ಸಾರಿಗೆ ನೌಕರರಿಗೆ ಅನುಕೂಲವಾಗಲಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ಸರ್ಕಾರ ಆದೇಶ ನೀಡಿದ್ದು, ಸಾರಿಗೆ ಸಚಿವರು ಹಾಗು ನೌಕರರ ನಡುವೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.ಕರ್ತವ್ಯಕ್ಕೆ ಹಾಜರಾಗದೇ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹಲವು ಸಾರಿಗೆ ನೌಕರರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸಾರಿಗೆ ನೌಕರರ ವಜಾ ಆದೇಶವನ್ನು ಸರ್ಕಾರ ಹಿಂಪಡೆದಿದೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು, ಸಾರಿಗೆ ನೌಕರರು 12 ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿದ್ದೇನೆ. ಸಾರಿಗೆ ನೌಕರರ ಮುಷ್ಕರದ ಸಂದರ್ಭ ವಜಾಗೊಂಡಿದ್ದ 4200 ನೌಕರರರನ್ನು ಪುನರ್ ನೇಮಕ ಮಾಡುತ್ತೇವೆ.‌ ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ. ವೇತನ ವಿಚಾರವನ್ನು ಸರಿಪಡಿಬೇಕೆಂಬುವುದು ನೌಕರರ ಬೇಡಿಕೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ.‌ ಎಲ್ಲಾ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಮತ್ತು ಅಧಿಕಾರಿಗಳ ಜೊತೆ ಮಾತನಾಡಿ ಒಂದೊಂದಾಗಿ ಸಾರಿಗೆ ನೌಕರರ ಎಲ್ಲಾ ಬೇಡಿಕೆಗಳನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ. ‌

- Advertisement -