ವೃದ್ಧೆಯನ್ನು ಜೋಳಿಗೆಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಸಂಬಂಧಿಕರು

Prasthutha|

ಚಿಕ್ಕಮಗಳೂರು: ಮನೆ ಬಾಗಿಲಿಗೆ ವಾಹನಗಳು ಬರಲು ಸುವ್ಯವಸ್ಥಿತ ದಾರಿಯಿಲ್ಲದ ಕಾರಣ ವೃದ್ಧೆಯೊಬ್ಬರನ್ನು ಸಂಬಂಧಿಕರು ಜೋಳಿಗೆಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಘಟನೆ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ.

85 ವರ್ಷದ ವೃದ್ಧೆ ವೆಂಕಮ್ಮರನ್ನು ಮನೆಯಿಂದ ಜಮೀನಿನ ಕಾಲುದಾರಿಯಲ್ಲಿ ಹೊತ್ತೊಯ್ದ ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಮೀನೊಂದರ  ಮಧ್ಯದಲ್ಲಿ ವೆಂಕಮ್ಮ ಅವರ  ಮನೆಯಿರುವ ಕಾರಣ 2021ರಲ್ಲಿಯೇ ರಸ್ತೆ ಮಾಡಿಸಿಕೊಡಿ ಎಂದು ಸಚಿವ ಆರ್ ಆಶೋಕ್ ಮತ್ತು ಜಿಲ್ಲಾಧಿಕಾರಿಗಳಿಗೆ ವೆಂಕಮ್ಮ ಮನವಿ ಮಾಡಿದ್ದರು.

- Advertisement -

ಈ ಜಮೀನು ಭೂ ಸ್ವಾಧೀನ ಕಾಯ್ದೆ ಅಡಿಯಲ್ಲಿ ಮಂಜೂರಾಗಿದ್ದು, ಇಲ್ಲಿನ ಆದಿವಾಸಿ ಕುಟುಂಬಗಳು ಕಾಲು ದಾರಿಯಲ್ಲೇ ಓಡಾಡುತ್ತಿದ್ದಾರೆ. ಸರ್ಕಾರ ಮತ್ತು ಜಿಲ್ಲಾಡಳಿತದ ಅಸಡ್ಡೆಯ ವಿರುದ್ದ ಸ್ಥಳೀಯರು ಅಸಮಾಧಾನಗೊಂಡಿದ್ದಾರೆ.

- Advertisement -