ಕೊಡಗು: ಪ್ರವಾಹ ಪರಿಹಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿಗಳ ಅಧಿಕೃತ ಫೇಸ್‌ಬುಕ್ ಪೇಜಿನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಫೇಸ್‌ಬುಕ್ ಪೇಜಿನಲ್ಲಿ ಜಿಲ್ಲಾವಾರು ಅನುದಾನದ ಮಾಹಿತಿಯನ್ನು ನೀಡಿದ್ದಾರೆ. ಆದರೆ ಹೆಚ್ಚು ಮಳೆಯಾಗುತ್ತಿರುವ ಹಾಗೂ ನಾಶ ನಷ್ಟ ಅನುಭವಿಸುತ್ತಿರುವ ಕೊಡಗು ಜಿಲ್ಲೆಗೆ ಅನುದಾನ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾತ್ರವಲ್ಲ ಪಟ್ಟಿಯಲ್ಲಿ ಕೊಡಗು ಜಿಲ್ಲೆಯ ಹೆಸರು ನಾಪತ್ತೆಯಾಗಿದೆ.
ಈ ಬಗ್ಗೆ ನೆಟ್ಟಿಗರಿಂದ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.