ಕನ್ನಡ ಪರ ಹೋರಾಟಗಾರರ ಬಿಡುಗಡೆ ಮಾಡಿ: ಬಿಜೆಪಿ ನಾಯಕರು

Prasthutha|

ಬೆಂಗಳೂರು:ಕನ್ನಡದ ಬೋರ್ಡ್ ಹಾಕಬೇಕು ಎಂದು ಹೋರಾಟ ಮಾಡಿದವರ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಿರುವುದು ಸರಿಯಲ್ಲ. ಅವರನ್ನು ಬಿಡುಗಡೆ ಮಾಡಬೇಕು ಎಂದು ರಾಜ್ಯ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ.

- Advertisement -

ಕರ್ನಾಟಕದಲ್ಲಿ ಕನ್ನಡವೇ ಸತ್ಯ. ಕನ್ನಡವೇ ನಿತ್ಯ. ಕನ್ನಡದಲ್ಲಿ ಬೋರ್ಡ್ ಇರಬೇಕು ಎನ್ನುವುದರಲ್ಲಿ ತಪ್ಪೇನಿದೆ. ಸರ್ಕಾರವೇ ಆ ಕೆಲಸ ಮಾಡಲಿ. ಕನ್ನಡ ಪರ ಹೋರಾಟಗಾರರನ್ನು ಬಂಧಿಸಿದ್ದು ಸರಿಯಲ್ಲ. ಕೂಡಲೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಕನ್ನಡ ನೆಲದಲ್ಲಿ ಕನ್ನಡದ ನಾಮಲಕ ದೊಡ್ಡದಾಗಿ ಇರಬೇಕು. ಅದಕ್ಕೆ ಎಲ್ಲರೂ ಸಹಕರಿಸಬೇಕು. ಕನ್ನಡ ಹೋರಾಟಗಾರರನ್ನು ಬಂಧಿಸಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

- Advertisement -


Join Whatsapp