ಪ್ರಜ್ವಲ್ ರೇವಣ್ಣಗೆ ರಿಲೀಫ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ

Prasthutha|

ನವದೆಹಲಿ: ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

- Advertisement -


ಲೋಕಸಭೆಗೆ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠವು, ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.


ಅಲ್ಲದೇ ಸಂಸತ್ ಕಲಾಪಕ್ಕೆ ಹಾಜರಾಗಲು ಅವಕಾಶ ನೀಡಿದೆ. ಆದರೆ ಸಂಸತ್ ನಿಂದ ಬರುವ ಭತ್ಯೆ ಬಳಕೆ ಮಾಡದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.



Join Whatsapp