Home ಟಾಪ್ ಸುದ್ದಿಗಳು ಶಾಲೆಗಳಲ್ಲಿ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ, ಮುಂದಿನ ತೀರ್ಪಿಗೆ ಕಾಯುತ್ತೇವೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಶಾಲೆಗಳಲ್ಲಿ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ, ಮುಂದಿನ ತೀರ್ಪಿಗೆ ಕಾಯುತ್ತೇವೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಪ್ರಪಂಚದ ಎಲ್ಲೆಡೆ ಸ್ತ್ರೀಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ಒಳ್ಳೆಯ ತೀರ್ಪು ಬರುತ್ತದೆ ಎನ್ನುವ ನಿರೀಕ್ಷೆ ಸರ್ಕಾರಕ್ಕೆ ಇತ್ತು. ಆದರೆ ಇದು ವಿಭಜಿತ ತೀರ್ಪು ಬಂದಿದೆ. ಮುಂದಿನ ತೀರ್ಪಿಗೆ ಸರ್ಕಾರ ಕಾಯುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯಿಸಿದ್ದಾರೆ.


ಕರ್ನಾಟಕ ಹಿಜಾಬ್ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾದ ನಂತರ ಇದಕ್ಕೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯೆ ನೀಡಿದರು. ಸರ್ಕಾರದ ಶಿಕ್ಷಣ ಕಾಯ್ದೆಯ ಪ್ರಕಾರ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ. ಸರ್ಕಾರಿ ಮತ್ತು ಎಲ್ಲ ಶಾಲೆಗಳು ಅದೇ ಕಾಯ್ದೆಯ ಪ್ರಕಾರ ನಡೆಯುತ್ತೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಮುಂದುವರಿಯುತ್ತದೆ ಎಂದರು.

Join Whatsapp
Exit mobile version