Home ಟಾಪ್ ಸುದ್ದಿಗಳು “ಕುಮಾರಸ್ವಾಮಿಗೆ ಚುನಾವಣೆ ಬಂದಾಗ ಮಾತ್ರ ಅಲ್ಪಸಂಖ್ಯಾತರ ನೆನಪು”: ಯು.ಟಿ ಖಾದರ್ ತಿರುಗೇಟು

“ಕುಮಾರಸ್ವಾಮಿಗೆ ಚುನಾವಣೆ ಬಂದಾಗ ಮಾತ್ರ ಅಲ್ಪಸಂಖ್ಯಾತರ ನೆನಪು”: ಯು.ಟಿ ಖಾದರ್ ತಿರುಗೇಟು

ಹಾನಗಲ್: ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಶಾಸಕ ಯು.ಟಿ. ಖಾದರ್, ಚುನಾವಣೆ ಸಮೀಪಿಸುತ್ತಿದ್ದಂತೆ ಕುಮಾರಸ್ವಾಮಿಗೆ ಅಲ್ಪಸಂಖ್ಯಾತರು ನೆನಪಾಗುತ್ತಾರೆ. ಮೊದಲು ಅವರ ಪಕ್ಷವನ್ನು ನೋಡಿಕೊಳ್ಳಲಿ ಎಂದಿದ್ದಾರೆ.


ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ಮಾತನಾಡಿದ ಅವರು, ಜೆಡಿಎಸ್ ಮೂಲಕ ಬಿಜೆಪಿ, ಆರ್.ಎಸ್.ಎಸ್. ಅಜೆಂಡಾ ಅನುಷ್ಠಾನ ಮಾಡಲಾಗುತ್ತಿದೆ. ಉಪಚುನಾವಣೆಯಲ್ಲಿ ಜನರೇ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕುಮಾರಸ್ವಾಮಿ ಚುನಾವಣೆ ಬಂದಾಗ ಮಾತ್ರ ಇಂತಹ ಹೇಳಿಕೆ ನೀಡುತ್ತಿರುವುದರ ಹಿಂದಿನ ಉದ್ದೇಶವೇನು ? ನಮ್ಮ ಪಕ್ಷದ ಬಗ್ಗೆ ಆರೋಪ ಮಾಡುವ ಬದಲು ಅವರ ಪಕ್ಷದ ಬಗ್ಗೆ ಮೊದಲು ನೋಡಿಕೊಳ್ಳಲಿ. ನಮ್ಮ ಪಕ್ಷದಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದ್ದರೆ, ಸಮಸ್ಯೆಯಾಗಿದ್ದರೆ ಅದನ್ನು ಬಗೆಹರಿಸಲು ನಮ್ಮ ಪಕ್ಷದ ರಾಜ್ಯ ನಾಯಕರು, ಶಾಸಕರು, ಕಾರ್ಯಕರ್ತರಿದ್ದಾರೆ. ನಮ್ಮ ಬಗ್ಗೆ ಮಾತನಾಡುವ ಮೊದಲು ಕುಮಾರಸ್ವಾಮಿ ಜೆಡಿಎಸ್ ನಲ್ಲಿ ಏನಾಗಿದೆ ಎಂಬುದನ್ನು ನೋಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

Join Whatsapp
Exit mobile version