ಉತ್ತರ ಪ್ರದೇಶದಲ್ಲಿ ಬಿಜೆಪಿ ಪರ ಕಾರ್ಯ ನಿರ್ವಹಿಸುತ್ತಿರುವ 4 ಉನ್ನತ ಅಧಿಕಾರಿಗಳ ವಜಾಕ್ಕೆ ಸಮಾಜವಾದಿ ಪಕ್ಷ ಒತ್ತಾಯ

Prasthutha|

ಲಕ್ನೋ: ಉತ್ತರ ಪ್ರದೇಶದಲ್ಲಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸಬೇಕಾಗಿರುವುದರಿಂದ ಸರ್ಕಾರದ ನಾಲ್ವರು ಉನ್ನತ ಅಧಿಕಾರಿಗಳನ್ನು ತಕ್ಷಣವೇ ತಮ್ಮ ಹುದ್ದೆಯಿಂದ ವಜಾಗೊಳಿಸಬೇಕೆಂದು ಸಮಾಜವಾದಿ ಪಕ್ಷ (ಎಸ್ಪಿ) ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

- Advertisement -

ಚುನಾವಣೆಗೆ ಒಳಪಡುವ ರಾಜ್ಯದಲ್ಲಿ ಗೃಹ ಖಾತೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ತಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ( ಮಾಹಿತಿ ) ನವನೀತ್ ಸೆಹಗಲ್, ಎಡಿಜಿ ( ಕಾನೂನು ಮತ್ತು ಸುವ್ಯವಸ್ಥೆ ) ಪ್ರಶಾಂತ್ ಕುಮಾರ್ ಮತ್ತು ಎಡಿಜಿ ಅಮಿತಾಬ್ ಯಶ್ ಅವರು ಬಿಜೆಪಿ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಈ ಮೇಲಿನ ಅಧಿಕಾರಿಗಳನ್ನು ವಜಾಗೊಳಿಸದೆ ಸ್ವತಂತ್ರ, ನಿಷ್ಪಕ್ಷಪಾತ ಮತ್ತು ನ್ಯಾಯಯುತವಾಗಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಎಸ್ಪಿ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಚೌಧರಿ, ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರನ್ನು ಒತ್ತಾಯಿಸಿದ್ದಾರೆ.

Join Whatsapp
Exit mobile version