‘ಹಿಂದೂ ವಿರೋಧಿ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ’: ಶ್ರೀರಾಮ ಸೇನೆ ಒತ್ತಾಯ

Prasthutha|

ಬೀದರ್: ದೇವಸ್ಥಾನಗಳನ್ನು ನೆಲಸಮಗೊಳಿಸಿ ಬಹುಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ.

- Advertisement -

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಸಂಘ ಪರಿವಾರದಿಂದ ಬಂದವರಲ್ಲ, ಅವರೊಬ್ಬ ಕಮ್ಯುನಿಸ್ಟ್ ಪಕ್ಷದಿಂದ ಬಂದಿರುವ ನಾಯಕ. ಅವರಲ್ಲಿ ಹಿಂದೂಪರ ಗುಣಗಳು ಇರಲು ಸಾಧ್ಯವಿಲ್ಲ. ಹಾಗಾಗಿ ಹಿಂದೂ ವಿರೋಧಿ ನಿಲುವುಳ್ಳ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ತೆಗೆದು, ಒಬ್ಬ ಹಿಂದೂವಾದಿ ನಾಯಕನನ್ನು ಮುಖ್ಯಮಂತ್ರಿ ಮಾಡಬೇಕು. ಇಲ್ಲವಾದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುವುದು ನಿಶ್ಚಿತ ಎಂದು ಎಚ್ಚರಿಸಿದ್ದಾರೆ.

ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಜನರ ಅಭಿವೃದ್ಧಿಗಾಗಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಂಡಿಲ್ಲ. ಬದಲಾಗಿ ಹಿಂದೂಗಳ ಶ್ರದ್ಧಾ ಕೇಂದ್ರಗಳನ್ನು ನೆಲಸಮ ಮಾಡುವ ಮೂಲಕ ತಮ್ಮ ಆಡಳಿತವನ್ನು ದುರುಪಯೋಗಪಡಿಸಿದ್ದಾರೆ. ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕಾರವಧಿಯಲ್ಲಿ ಸಾಕಷ್ಟು ಮಠ- ಮಂದಿರಗಳನ್ನು ಅಭಿವೃದ್ಧಿಪಡಿಸಿದ್ದರು. ಆದರೆ, ಇಂದು ಸಿಎಂ ಹುದ್ದೆಗಾಗಿ ಅವರೇ ಸೂಚಿಸಿದ ವ್ಯಕ್ತಿ, ಬಿಎಸ್‌ವೈ ಮಾರ್ಗ ಅನುಸರಿಸದೇ ಹಿಂದೂಗಳ ಜತೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.



Join Whatsapp