ಅನರ್ಹರನ್ನು BPL ಕಾರ್ಡ್‌’ನಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯ ತಾಕೀತು

Prasthutha|

ಬೆಂಗಳೂರು: ಅನರ್ಹರನ್ನು ಬಿಪಿಎಲ್‌ ಕಾರ್ಡ್‌ ನಿಂದ ಕೈಬಿಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

- Advertisement -

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಪ್ರಧಾನ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ 4,37,23,911 ಜನ ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆದುಕೊಂಡಿದ್ದಾರೆ. 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಹೊಸ ಬಿಪಿಎಲ್‌ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿಗಳು ಬಂದಿವೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್ ಕಾರ್ಡ್ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಮುಂದುವರಿದು ತಮಿಳುನಾಡಿನಲ್ಲಿ ಬಿಪಿಎಲ್ ಪ್ರಮಾಣ ಶೇ.40 ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕೆಲಸ ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.



Join Whatsapp