ಪ್ರಿಯಾಂಕ್ ಖರ್ಗೆಯನ್ನು ಸಚಿವ ಸಂಪುಟದಿಂದ ವಜಾ ಮಾಡಿ: ಛಲವಾದಿ ನಾರಾಯಣಸ್ವಾಮಿ

Prasthutha|

ಬೆಂಗಳೂರು: ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು. ಈ ಸಂಬಂಧ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸುತ್ತೇವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

- Advertisement -


ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಒಂದು ಮನೆಗೆ ಸೀಮಿತವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಧಾಕೃಷ್ಣ ಎಂಬುವರ ಹೆಸರಿನಲ್ಲಿ ಟ್ರಸ್ಟ್ ಇದೆ. ಕಲಬುರಗಿಯಲ್ಲಿ ಟ್ರಸ್ಟ್ ರಿಜಿಸ್ಟರ್ ಮಾಡಲಾಗಿದೆ. ದಲಿತರು ಅಂದರೆ ಒಂದೇ ಒಂದು ಕುಟುಂಬವಲ್ಲ. ಅನೇಕ ದಲಿತ ಕುಟುಂಬ ಕೂಡ ಇವೆ ಎಂದು ಹೇಳಿದರು.


ಒಂದೇ ಕುಟುಂಬಕ್ಕೆ ಹಲವು ಎಕರೆ ಜಮೀನು ಕೊಟ್ಟಿದ್ದಾರೆ. ಅದು ಕೂಡ ಏರೋಸ್ಪೇಸ್ ಹೆಸರಲ್ಲಿ ತೆಗೆದುಕೊಂಡಿದ್ದಾರೆ. ಇತರೆ ಟ್ರಸ್ಟ್ ಗೂ ಅರ್ಧ ಎಕರೆ ಸಿಕ್ಕಿದ್ದರೂ ಅನುಕೂಲ ಆಗುತ್ತಿತ್ತು. ಇದು ನಂಬಿಕೆಯ ಪ್ರಶ್ನೆ. ಇದು ಮತ್ತೊಂದು ಮುಡಾ ಕೇಸ್ ಆಗಲಿದೆ. ಆ ಜಾಗ ಬೇಕು ಅಂತ ಅನೇಕರು ಅರ್ಜಿ ಸಲ್ಲಿಸಿದ್ದಾರೆ. ಖರ್ಗೆ ಕುಟುಂಬ ಒಂದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಟುಂಬವಲ್ಲ. ಈ ಬಗ್ಗೆ ಸಂಪೂರ್ಣ ದಾಖಲೆ ಇಟ್ಟು ಮಾತನಾಡುತ್ತೇನೆ. ನಾನು ಹಿಟ್ ಆ್ಯಂಡ್ ರನ್ ಮಾಡುವುದಿಲ್ಲ ಎಂದರು.



Join Whatsapp