ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ರೇಣುಕಾ ಕೆ ಸುಕುಮಾರ್ ನೇಮಕ

Prasthutha|

ಧಾರವಾಡ: ಹುಬ್ಬಳ್ಳಿ ಧಾರವಾಡದ ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ರೇಣುಕಾ ಕೆ ಸುಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

- Advertisement -


ರೇಣುಕಾ ಅವರು ಈ ಹಿಂದೆ ಕಮಿಷನರೇಟ್ ನಲ್ಲಿ ಉಪ ಪೊಲೀಸ್ ಆಯುಕ್ತರಾಗಿ (ಕಾನೂನು ಮತ್ತು ಸುವ್ಯವಸ್ಥೆ) ಸೇವೆ ಸಲ್ಲಿಸಿದ್ದರು.


ಆಗಸ್ಟ್ 9 ರಂದು ಹೊರಡಿಸಿದ ವರ್ಗಾವಣೆ ಆದೇಶದಲ್ಲಿ ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಬದಲಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ರೇಣುಕಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -


2011ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ರೇಣುಕಾ ಅವರು ಪ್ರಸ್ತುತ ಡೆಪ್ಯುಟಿ ಕಮಾಂಡೆಂಟ್ ಜನರಲ್, ಗೃಹ ರಕ್ಷಕರು ಮತ್ತು ಸಿವಿಲ್ ಡಿಫೆನ್ಸ್ನ ಪದನಿಮಿತ್ತ ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Join Whatsapp