ಬಿಜೆಪಿ ಭಿನ್ನಮತ | ಹೈಕಮಾಂಡ್ ಗೆ ಪತ್ರ ಬರೆದ ಈಶ್ವರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೇಣುಕಾಚಾರ್ಯ

Prasthutha: April 1, 2021

ಬೆಂಗಳೂರು : ಈಶ್ವರಪ್ಪನವರಂತಹ ಹಿರಿಯ ಸಚಿವರೇ ಮುಖ್ಯಮಂತ್ರಿಗಳ ವಿರುದ್ದ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಇದನ್ನು ಬಗೆ ಹರಿಸಿಕೊಳ್ಳಬೇಕಿತ್ತು ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

 “ಈಗ ಉಪ-ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಹೀಗೆ ಮಾಡಿರುವುದರಿಂದ ಚುನಾವಣೆ ಮೇಲೆ ಪರಿಣಾಮ ಬೀರಲ್ವಾ? ಪಕ್ಷದ ಇಮೇಜ್ ಹಾಳಾಗುವುದಿಲ್ವಾ..? ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಶ್ವರಪ್ಪರಿಗೆ ಪ್ರಶ್ನಿಸಿದ್ದಾರೆ.

ನಾವು 60 ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿರುವುದರಿಂದ ಅವರು ಬಿಡುಗಡೆ ಮಾಡಿದ್ದಾರೆ ಅದರಲ್ಲಿ ತಪ್ಪೇನು? ಈ ಮೊದಲು ಈಶ್ವರಪ್ಪನವರಿಗೂ ಭೇಟಿ ಮಾಡಿ ನಾವು ಮನವಿ ಮಾಡಿದ್ದೆವು. ಆದರೆ ಅವರು ಸ್ಪಂದಿಸಿರಲಿಲ್ಲ. ಹಾಗಾಗಿ ವಿಧಿಯಿಲ್ಲದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕಾಯ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!