Home ಟಾಪ್ ಸುದ್ದಿಗಳು ಶಾಸಕ ರೇಣುಕಾಚಾರ್ಯ ಆಸ್ಪತ್ರೆಗೆ ದಾಖಲು

ಶಾಸಕ ರೇಣುಕಾಚಾರ್ಯ ಆಸ್ಪತ್ರೆಗೆ ದಾಖಲು

ಮುಂಬೈ: ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಶಸ್ತ್ರಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಿಗೆ ಅಪಘಾತವಾಗಿದ್ದು, ಕಾಲಿಗೆ ತೀವ್ರ ಪೆಟ್ಟಾಗಿತ್ತು. ಮೂರು ತಿಂಗಳಿಂದ ಕಾಲು ನೋವು ಬಾಧೆ ಕಾಡುತ್ತಲೇ ಇತ್ತು. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಮಾಡಿಸಿಕೊಂಡಿರುವೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನನ್ನ ಕಾಲಿಗೆ ತಜ್ಞ ವೈದ್ಯರು ಸರ್ಜರಿ ಮಾಡಿದ್ದಾರೆ. ಸದ್ಯಕ್ಕೆ ರೆಸ್ಟ್ನಲ್ಲಿರುವೆ. ಮುಂದಿನ 15 ದಿನ ಬೆಂಗಳೂರಿನಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗುವೆ. ನಿಮ್ಮ ಹಾರೈಕೆ ಇರಲಿ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

Join Whatsapp
Exit mobile version