ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಅವರ ಮಧ್ಯಂತರ ಜಾಮೀನು ಆದೇಶವನ್ನು ನಾಳೆಗೆ (ಅ.30) ಕಾಯ್ದಿರಿಸಿದೆ.
ದರ್ಶನ್ ಪರ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್, ನಮ್ಮ ಕಕ್ಷಿದಾರರಿಗೆ ಎಲ್ 5, ಎ1 ನಡುವೆ ಡಿಸ್ಕ್ ಊದಿಕೊಂಡಿದೆ. ಇದರಿಂದ ಮುಂದೆ ಆರೋಗ್ಯ ಸಮಸ್ಯೆಗಳು ಬಾಧಿಸಬಹುದು. ಹೀಗಾಗಿ ಅವರಿಗೆ ಚಿಕಿತ್ಸೆಯ ಅಗತ್ಯವಿದೆ. ಇಲ್ಲಿ ನಾವು ಕೇಳುತ್ತಿರುವುದು ಕೇವಲ ಮಧ್ಯಂತರ ಜಾಮೀನು ಅಷ್ಟೇ. ಹೀಗಾಗಿ ಕೋರ್ಟ್ ನಮ್ಮ ಮನವಿಯನ್ನು ಪರಿಗಣಿಸಿ, ಜಾಮೀನು ನೀಡಬೇಕು ಎಂದು ವಾದಿಸಿದರು.
ದರ್ಶನ್ ಪರ ವಕೀಲ ನಾಗೇಶ್ ಮತ್ತು ಎಸ್ಪಿಪಿ ಪ್ರಸನ್ನಕುಮಾರ್ ಮಂಡಿಸಿದ ವಾದವನ್ನು ಆಲಿಸಿದ ಹೈಕೋರ್ಟ್, ಅಂತಿಮವಾಗಿ ಎ2 ಆರೋಪಿ ದರ್ಶನ್ ಮಧ್ಯಂತರ ಜಾಮೀನು ಅ.30ಕ್ಕೆ ಕಾಯ್ದಿರಿಸಿದೆ.