370ನೇ ವಿಧಿ ರದ್ದತಿ: ಡಿ.11ರಂದು ಸುಪ್ರೀಂ ಕೋರ್ಟ್ ತೀರ್ಪು

Prasthutha|

ನವದೆಹಲಿ: 2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ಇದನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲಾಗಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಡಿಸೆಂಬರ್ 11 ರಂದು ತನ್ನ ತೀರ್ಪನ್ನು ಪ್ರಕಟಿಸಲಿದೆ.

- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ಪೀಠವು ಹದಿನಾರು ದಿನಗಳ ಸುದೀರ್ಘ ವಿಚಾರಣೆಯನ್ನು ಮಾಡಿತ್ತು. ಆಗಸ್ಟ್ 2, 2023 ರಂದು ಈ ವಿಷಯದ ವಿಚಾರಣೆ ಪ್ರಾರಂಭವಾಗಿತ್ತು. 2023 ರ ಸೆಪ್ಟೆಂಬರ್ 5 ರಂದು ಈ ವಿಷಯದ ತೀರ್ಪನ್ನು ಕಾಯ್ದಿರಿಸಿತ್ತು.

ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಜೆ & ಕೆ ಮರುಸಂಘಟನೆ ಕಾಯ್ದೆಯನ್ನು ಅರ್ಜಿದಾರರು ಪ್ರಶ್ನಿಸಿದ್ದರು.

Join Whatsapp