ನಾಪೋಕ್ಲು: ರಾಫೆಲ್ಸ್ ಇಂಟರ್ ನ್ಯಾಷನಲ್ ಇಂಗ್ಲಿಷ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣದ ನಂತರ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ತನ್ವೀರ್, ದಿನದ ಮಹತ್ವವನ್ನು ವಿವರಿಸಿ, ನಮ್ಮ ದೇಶವನ್ನು ಹೆತ್ತ ತಾಯಿಯಂತೆ ಪ್ರೀತಿಸಿ ಗೌರವಿಸಬೇಕೆಂದರು.
ಬ್ರಿಟಿಷರ ಗುಲಾಮರಂತಿದ್ದ ನಾವು ಹಲವು ಮಹನೀಯರ ನಿಸ್ವಾರ್ಥ ಸೇವೆಯಿಂದಾಗಿ ಸ್ವತಂತ್ರವಾಗಿ ಭವ್ಯ ಭಾರತದಲ್ಲಿ ಜೀವಿಸುವಂತಾಗಿದ್ದು, ಎಲ್ಲರಿಗೂ ಸಮಾನವಾದಂತಹ ಹಕ್ಕು ಹಾಗೂ ಕರ್ತವ್ಯ ಸಿಗಲು ಕಾರಣರಾದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್’ರವರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಉಪನ್ಯಾಸಕರಾದ ಹುಸೈನ್ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ನಂತರ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.