ದೆಹಲಿ : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೇರಿದ್ದು, ತಾಲಿಬಾನ್ ಆಡಳಿತದ ಕುರಿತು ವಿಶ್ವದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಅರ್ನಬ್ ಗೋಸ್ವಾಮಿ ನೇತೃತ್ವದ ರಿಪಬ್ಲಿಕ್ ಟಿವಿಯು ತನ್ನ ಟ್ವಿಟರ್ ನ ಅಧಿಕೃತ ಖಾತೆಯಲ್ಲಿ ಸುದ್ದಿಯೊಂದನ್ನು ಪ್ರಕಟಿಸುತ್ತಾ #RepublicwithTaliban ಎಂಬ ಹ್ಯಾಶ್ ಟ್ಯಾಗ್ ಅನ್ನು ಬಳಸಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಅಶ್ರಫ್ ಘನಿಯವರ ಸಹೋದರ ಹಶ್ಮತ್ ಘನಿ ತಾಲಿಬಾನ್ ಗೆ ಬೆಂಬಲ ಘೋಷಿಸಿದ್ದಾರೆ ಎಂಬ ಸುದ್ದಿಯನ್ನು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸುವ ವೇಳೆ ಈ ಹ್ಯಾಶ್ ಟ್ಯಾಗ್ ಅನ್ನು ಬಳಸಲಾಗಿದೆ. ಈ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ