Home ಟಾಪ್ ಸುದ್ದಿಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದ.ಕ.ಶಾಸಕರ ನಿಯೋಗದಿಂದ ಗೃಹ ಸಚಿವರಿಗೆ ಮನವಿ

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದ.ಕ.ಶಾಸಕರ ನಿಯೋಗದಿಂದ ಗೃಹ ಸಚಿವರಿಗೆ ಮನವಿ

ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿ ಬಂದಿರುವ ಕರ್ನಾಟಕ ವಿಧಾನಮಂಡಲದ ಸದಸ್ಯರು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬುಧವಾರ ಭೇಟಿಯಾಗಿ, ಇತ್ತೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.


ನೆರೆಯ ಕೇರಳ ರಾಜ್ಯದಿಂದ ಆಗಮಿಸಿ, ಸ್ಥಳೀಯರ ಜೊತೆಗೆ ಸೇರಿಕೊಂಡು ಕೋಮು ಸಾಮರಸ್ಯ ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕರ ನಿಯೋಗ ಸಚಿವರಲ್ಲಿ ಮನವಿ ಮಾಡಿದೆ.


ಸಚಿವ ಅಂಗಾರ, ಹರೀಶ್ ಪೂಂಜಾ, ಸಂಜೀವ ಮಠಂದೂರು, ರಾಜೇಶ್ ನಾಯಕ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ನಿಯೋಗದಲ್ಲಿ ಇದ್ದರು.

Join Whatsapp
Exit mobile version