ಮಡಿಕೇರಿ | ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಹೆಸರು ನೋಂದಾಯಿಸಲು ಮನವಿ

Prasthutha|

ಮಡಿಕೇರಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ‘ರಾಗಿ’ ಖರೀದಿ ಸಂಬಂಧ ರೈತರು ತಮ್ಮ ಹೆಸರು ನೋಂದಾಯಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ ಅವರು ಮನವಿ ಮಾಡಿದ್ದಾರೆ.    

- Advertisement -

ರೈತರು ಬೆಂಬಲ ಬೆಲೆಯಡಿ ಅವಕಾಶ ಪಡೆಯುವಂತಾಗಲು ಕುಶಾಲನಗರದ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಕಚೇರಿಯಲ್ಲಿ ಹೆಸರು ನೋಂದಾಯಿಸಬೇಕಿದೆ. ಒಂದು ಕ್ವಿಂಟಾಲ್ ರಾಗಿಗೆ 3,377 ರೂ. ಬೆಂಬಲ ಬೆಲೆ ನಿಗಧಿಯಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರಾದ ನಾಗನಾಯಕ್ ಅವರು ರಾಗಿಯನ್ನು ಕುಶಾಲನಗರ ವ್ಯಾಪ್ತಿಯ ಕೂಡಿಗೆ, ಹೆಬ್ಬಾಲೆ, ಶಿರಂಗಾಲ, ತೊರೆನೂರು ಭಾಗಗಳಲ್ಲಿ ಬೆಳೆಯುತ್ತಾರೆ. ಹಾಗೆಯೇ ಗಡಿಭಾಗದ ಬೆಟ್ಟದಪುರ ಕಡೆಯಿಂದಲೂ ಬೆಂಬಲ ಬೆಲೆಯಡಿ ರಾಗಿ ನೀಡಲು ಕೃಷಿಕರು ಮುಂದೆ ಬರುತ್ತಾರೆ ಎಂದು ಅವರು ಮಾಹಿತಿ ನೀಡಿದರು.  

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ರಾಗಿ ಖರೀದಿ ಸಂಬಂಧಿಸಿದಂತೆ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ಅವರು, ಸರ್ಕಾರದ ನಿರ್ದೇಶನದಂತೆ ರಾಗಿ ಖರೀದಿಗೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು. 

ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಳದ ವ್ಯವಸ್ಥಾಪಕರಾದ ಜಯಶಂಕರ, ಅವರು ರಾಗಿ ಖರೀದಿ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.  

ಬೆಳೆ ಹಾನಿ ಸಮೀಕ್ಷೆ ಸಂಬಂಧಿಸಿದಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಂದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾಹಿತಿ ಪಡೆದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್, ಸಹಾಯಕ ನಿರ್ದೇಶಕರಾದ ರೀಟಾ, ಗೌರಿ, ಇತರರು ಉಪಸ್ಥಿತಿ ಇದ್ದರು.



Join Whatsapp