ತಮಿಳುನಾಡು | ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಶೇ. 7.5 ಮೀಸಲಾತಿ

Prasthutha|

ಚೆನ್ನೈ : ವೈದ್ಯಕೀಯ ಪ್ರವೇಶ ಪರೀಕ್ಷೆ ತೇರ್ಗಡೆಯಾದ ಸರಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕಾಲೇಜುಗಳಲ್ಲಿ ಶೇ. 7.5 ಮೀಸಲಾತಿ ನೀಡುವ ಬಗ್ಗೆ ತಮಿಳುನಾಡು ಸರಕಾರ ಆದೇಶವೊಂದನ್ನು ಜಾರಿಗೊಳಿಸಿದೆ.

- Advertisement -

ಈ ಕುರಿತ ಮಸೂದೆ ತಮಿಳುನಾಡು ವಿಧಾನಸಭೆಯಲ್ಲಿ ಮಂಡನೆಯಾಗಿ, ರಾಜ್ಯಪಾಲರ ಅನುಮತಿಗಾಗಿ ಕಾಯಲಾಗುತ್ತಿದೆಯಾದರೂ, ಈ ನಡುವೆ ಸರಕಾರ ಹೊಸ ಆದೇಶ ಜಾರಿಗೊಳಿಸಿದೆ. ಈ ವರ್ಷದಿಂದಲೇ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ. 7.5 ಮೀಸಲಾತಿ ಜಾರಿಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನೀಟ್ ಫಲಿತಾಂಶ ಹೊರಬಿದ್ದಿರುವುದರಿಂದ ಈ ಆದೇಶ ಈಗಲೇ ಜಾರಿಗೊಳಿಸುವ ಅನಿವಾರ್ಯತೆಯಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಉಪ ಮೀಸಲಾತಿಯಿಂದ ಸುಮಾರು 300 ಮಂದಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆಯಲು ಅನುಕೂಲವಾಗಲಿದೆ.  

Join Whatsapp