ಬೆಂಗಳೂರು: ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ.
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ ಇದೆ. ಆದರೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ.
ಪ್ರವರ್ಗ 2ಬಿ ಅಡಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಪತ್ರ ಬರೆದಿದ್ದರು.