Home ಟಾಪ್ ಸುದ್ದಿಗಳು ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮಹಿಳಾ ಮೀಸಲಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ಡಿ ಹುದ್ದೆಗಳ ಹೊರಗುತ್ತಿಗೆ ನೇಮಕದಲ್ಲಿ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ.

ಇದರ ಅನ್ವಯ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕ ಮಾಡಿಕೊಳ್ಳಬೇಕಿದೆ. ಈ ಮೂಲಕ ಹೊರಗುತ್ತಿಗೆಯಲ್ಲೂ ಮೀಸಲಾತಿ ಕಡ್ಡಾಯಗೊಳಿಸಿ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್ ಗಳು, ಸ್ವಚ್ಛತಾ ಸಿಬ್ಬಂದಿ ಗ್ರೂಪ್ ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯ ನೀತಿಯಾಗಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಲು 2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.. ಹಾಗಾಗಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮಗಳನ್ನುಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯವಾಗುವುದಿಲ್ಲ.

Join Whatsapp
Exit mobile version