ವಿಜಯಪುರ: ರಾಜ್ಯದ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಪ್ರಸಿದ್ಧ ಸಾಲು ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ವಾಕ್ಯವನ್ನು ತಿದ್ದುಪಡಿ ಮಾಡಿದ ಪ್ರಕರಣ ವಿವಾದಕ್ಕೆ ಗುರಿಯಾಗುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು ಮೊದಲಿನಂತೆಯೇ ಕುವೆಂಪು ಪದ್ಯದ ಸಾಲಿಗೆ ಬದಲಾಯಿಸಿದ್ದಾರೆ.
ಇದಕ್ಕೂ ಮೊದಲು, ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬನ್ನಿ ಎಂದಿದ್ದ ಘೋಷವಾಕ್ಯವನ್ನು “ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ” ಎಂದು ತಿದ್ದುಪಡಿ ಮಾಡಲಾಗಿತ್ತು. ಈ ಬದಲಾವಣೆ ವಿವಾದವಾಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಮತ್ತೆ ಹಿಂದಿನ ಘೋಷವಾಕ್ಯವನ್ನೇ ಅಳವಡಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿನ್ಸಿಪಾಲ್ ದುಂಡಪ್ಪ , ಮುಖ್ಯ ಕಾರ್ಯದರ್ಶಿಗಳ ಮೌಖಿಕ ಸೂಚನೆಯಂತೆ ಘೋಷವಾಕ್ಯ ಬದಲಾಯಿಸಿದ್ದೆವು. ಇದು ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಘೋಷವಾಕ್ಯವನ್ನು ಮೊದಲಿನಂತೆಯೇ ಬದಲಾವಣೆ ಮಾಡಿದ್ದೇವೆ ಎಂದು ಹೇಳಿದ್ದಾರೆ.