Home ಟಾಪ್ ಸುದ್ದಿಗಳು ಚುನಾವಣಾ ಆಯೋಗದ ಮುಖ್ಯಸ್ಥರಾಗಬೇಕಾದರೆ ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡಬೇಕು । ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಚುನಾವಣಾ ಆಯೋಗದ ಮುಖ್ಯಸ್ಥರಾಗಬೇಕಾದರೆ ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡಬೇಕು । ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಪ್ರಜಾಪ್ರಭುತ್ವದಲ್ಲಿ ಚುನಾವಣಾ ಆಯೋಗದ ಸ್ವಾತಂತ್ರ್ಯದ ಅಗತ್ಯವನ್ನು ಪುನರುಚ್ಚರಿಸುವ  ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಇಂದು,  ರಾಜ್ಯ ಅಥವಾ ಕೇಂದ್ರ ಸರ್ಕಾರದ ಸ್ಥಾನವನ್ನು ಅಲಂಕರಿಸಿರುವವರನ್ನು ರಾಜ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲು ಸಾಧ್ಯವಿಲ್ಲ ಎಂದು ತೀರ್ಪು ನೀಡಿದೆ. ಜಿದ್ದಾಜಿದ್ದಿನ ಐದು ರಾಜ್ಯಗಳ ವಿಧಾನಸಭೆಯ ಮಧ್ಯೆ ಸುಪ್ರೀಂ ಕೋರ್ಟಿನ ಈ ತೀರ್ಪು ಮತ್ತಷ್ಟು ಮಹತ್ವವನ್ನು ಪಡೆಯುತ್ತದೆ.

ರಾಜ್ಯ ಚುನಾವಣಾ ಆಯೋಗಗಳು ಒಂದು ಪಕ್ಷದ ಜೊತೆಗೂಡಿವೆ ಎಂದು ಈ ಐದು ರಾಜ್ಯಗಳು ಒಂದೆಡೆ ಆರೋಪಿಸುತ್ತಿರುವಾಗ “ರಾಜ್ಯ ಚುನಾವಣಾ ಆಯೋಗಗಳ ಮುಖ್ಯಸ್ಥರಾಗಬೇಕಾದರೆ ಸರ್ಕಾರಿ ಅಧಿಕಾರಿಗಳು ತಮ್ಮ ಕೆಲಸಗಳಿಗೆ ರಾಜೀನಾಮೆ ನೀಡಬೇಕಾಗುತ್ತದೆ” ಎಂಬ ತೀರ್ಪನ್ನು ಹೊರಡಿಸಿದ್ದು ಉತ್ತಮ ಬೆಳವಣಿಗೆಯಾಗಿದೆ. ಸುಪ್ರೀಂ ಕೋರ್ಟ್ ತನ್ನ ವಿಶೇಷ ಅಧಿಕಾರವನ್ನು ಬಳಸಿ 142 ನೇ ವಿಧಿ ಅನ್ವಯ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ತೀರ್ಪನ್ನು ಹೊರಡಿಸಿದೆ.

Join Whatsapp
Exit mobile version