ಕಾರ್ಯಕರ್ತರ ರಾಜೀನಾಮೆ ಪಕ್ಷವನ್ನು ಮುಳುಗಿಸಲ್ಲ
ದಾವಣಗೆರೆ: ಬೆಳ್ಳಾರೆಯ ಬಿಜೆಪಿ ಮುಖಂಡನ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುವುದರ ಕುರಿತು ಸಂಸದ ಜಿ.ಎಂ. ಸಿದ್ದೇಶ್ವರ್ ವ್ಯಂಗವಾಡಿದ್ದಾರೆ. ಟಿವಿಯಲ್ಲಿ ಬರ್ತೀವಿ ಅಂತಾ ರಾಜೀನಾಮೆ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ. ಅದೆಲ್ಲವೂ ಪ್ರಚಾರದ ಗಿಮಿಕ್. ರಾಜೀನಾಮೆ ಕೊಟ್ಟ ತಕ್ಷಣ ಪಕ್ಷವೇನು ಮುಳುಗಿ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಯುವಮೋರ್ಚಾ ಕಾರ್ಯಕರ್ತ ರ ರಾಜೀನಾಮೆ ವಿಚಾರದ ಕುರಿತು ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದೇಶ್ವರ್ ಅವರು ರಾಜೀನಾಮೆ ಕೊಟ್ಟ ತಕ್ಷಣ ಪಕ್ಷವೇನು ಮುಳುಗಿ ಹೋಗಲ್ಲ, ಇದು 11 ಕೋಟಿ ಕಾರ್ಯಕರ್ತರನ್ನು ಹೊಂದಿರುವ ಪಕ್ಷ. ಅವರ್ಯಾರು ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ, ರಾಜೀನಾಮೆ ಕೊಡುವ ಮುನ್ನ ನಮ್ಮ ಜಿಲ್ಲಾದ್ಯಕ್ಷರು ಶಾಸಕರು ನಮ್ಮ ಕಡೆ ಮಾತನಾಡಬೇಕು. ಅವರು ಪಕ್ಷಕ್ಕೆ ಇದುವರೆಗೂ ರಾಜೀನಾಮೆ ಸಲ್ಲಿಸಿಲ್ಲ ಅವರು ಕೊಟ್ಟಿದ್ದರೂ ಅಂಗೀಕಾರವಾಗುವುದಿಲ್ಲ ಎಂದು ಹೇಳಿದ್ದಾರೆ.
ಟೀವಿಯಲ್ಲಿ ಬರಬೇಕೆಂದು ರಾಜೀನಾಮೆ ಕೊಟ್ಟಿದ್ದೇವೆಂದು ಹೇಳಿರಬೇಕು, ಅವರೆಲ್ಲರೊಂದಿಗೆ ಮಾತನಾಡಿ ಸಮಾಧಾನಪಡಿಸುತ್ತೇವೆ. ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ 32 ಜನರ ಹತ್ಯೆಯಾಗಿತ್ತು. ನಮ್ಮ ಸರ್ಕಾರ ಇದ್ದಾಗ ಎರಡು ಹತ್ಯೆ ಆಗಿದೆ. ಕಾನೂನುಬದ್ಧವಾಗಿ, ಸಂವಿಧಾನಾತ್ಮಕವಾಗಿ ನಮ್ಮ ಮುಖ್ಯಮಂತ್ರಿ ಗಳು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.