ಬಿಜೆಪಿಯಿಂದ ಸ್ಪರ್ಧಿಸಲು ಪೊಲೀಸ್ ಹುದ್ದೆಗೆ ರಾಜೀನಾಮೆ

Prasthutha|

ವಿಜಯಪುರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಲು ಪೊಲೀಸ್‌ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಮಹೇಂದ್ರ ನಾಯಕ್‌ ಪೊಲೀಸ್‌ ಹುದ್ದೆಗೆ ರಾಜೀನಾಮೆ ನೀಡಿರುವ ಅಧಿಕಾರಿ.

2010ರಲ್ಲಿ ಪೊಲೀಸ್‌ ಹುದ್ದೆಗೆ ನೇರ ನೇಮಕಾತಿ ಹೊಂದಿದ್ದರು. ಅವರು ಸದ್ಯ ಬಾಗಲಕೋಟೆಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕೆಲಸ ಮಾಡುತ್ತಿದ್ದಾರೆ.

- Advertisement -

ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಪೊಲೀಸ್‌ ಅಧಿಕಾರಿ ಮಹೇಂದ್ರ ನಾಯಕ್‌ ವಿಜಯಪುರ ಜಿಲ್ಲೆಯ ನಾಗಠಣ (ಮೀಸಲು) ಮತಕ್ಷೇತ್ರದ ಬಿಜೆಪಿ ಆಕಾಂಕ್ಷಿ ಆಗಿದ್ದಾರೆ.

Join Whatsapp