Home ಟಾಪ್ ಸುದ್ದಿಗಳು 370ನೇ ವಿಧಿ ರದ್ದತಿ ವಿರುದ್ಧ ನಿರ್ಣಯ: ಜಮ್ಮು-ಕಾಶ್ಮೀರದ ಮೊದಲ ಅಧಿವೇಶನದಲ್ಲಿ ಭಾರಿ ಕೋಲಾಹಲ

370ನೇ ವಿಧಿ ರದ್ದತಿ ವಿರುದ್ಧ ನಿರ್ಣಯ: ಜಮ್ಮು-ಕಾಶ್ಮೀರದ ಮೊದಲ ಅಧಿವೇಶನದಲ್ಲಿ ಭಾರಿ ಕೋಲಾಹಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ವರ್ಷಗಳ ಬಳಿಕ ಮೊದಲ ಬಾರಿ ನಡೆದ ವಿಧಾನಸಭೆ ಅಧಿವೇಶನದ ಮೊದಲ ದಿನ ಕೋಲಾಹಲಕ್ಕೆ ಸಾಕ್ಷಿಯಾಯಿತು.


ನೂತನವಾಗಿ ಚುನಾಯಿತಗೊಂಡ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ಪ್ರಥಮ ಅಧಿವೇಶನ ಸೋಮವಾರ ಬೆಳಿಗ್ಗೆ ಆರಂಭಗೊಂಡಿತ್ತು. ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದತಿ ವಿರುದ್ಧ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಶಾಸಕ ವಹೀದ್ ಪಾರಾ ನಿರ್ಣಯ ಮಂಡಿಸಿದ ಬಳಿಕ ಈ ಗದ್ದಲ ನಡೆದಿದೆ.


ತಾವು ಅಂತಹ ಯಾವುದೇ ನಿರ್ಣಯವನ್ನು ಇನ್ನೂ ಸ್ವೀಕರಿಸಿಲ್ಲ ಎಂಬುದಾಗಿ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ನ ಸ್ಪೀಕರ್ ರಹೀಮ್ ರಾದರ್ ಸ್ಪಷ್ಟನೆ ನೀಡಿದರೂ, ಪಾರಾ ಅವರ ನಿರ್ಣಯದ ವಿರುದ್ಧ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.

ಕೇಂದ್ರ ಸರ್ಕಾರವು 2019ರ ಅಗಸ್ಟ್ ತಿಂಗಳಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿತ್ತು. ವಿಶೇಷ ಸ್ಥಾನಮಾನವನ್ನು ಮರು ಸ್ಥಾಪನೆ ಮಾಡಬೇಕು ಎಂದು ಪಿಡಿಪಿ ಆಗ್ರಹಿಸಿದೆ.

Join Whatsapp
Exit mobile version