Home ಟಾಪ್ ಸುದ್ದಿಗಳು ಮಂದಿರ ಕೆಡವಿ ಮಸೀದಿ ನಿರ್ಮಿಸಿರುವ ಎಲ್ಲ ದೇವಾಲಯಗಳ ಜೀರ್ಣೋದ್ಧಾರ: ಕೆ.ಎಸ್.ಈಶ್ವರಪ್ಪ

ಮಂದಿರ ಕೆಡವಿ ಮಸೀದಿ ನಿರ್ಮಿಸಿರುವ ಎಲ್ಲ ದೇವಾಲಯಗಳ ಜೀರ್ಣೋದ್ಧಾರ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಂದಿರ ಕೆಡವಿ ಮಸೀದಿ ನಿರ್ಮಿಸಿರುವ ಹಿಂದುಗಳ ಎಲ್ಲ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಕೇಂದ್ರ ಸರ್ಕಾರ ಶ್ರಮಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರ ಅವರು, ಕಾಶಿ ವಿಶ್ವನಾಥ ಮಂದಿರದಲ್ಲಿ ಮಸೀದಿ ಇದೆ. ಮುಂದಿನ ದಿನಗಳಲ್ಲಿ ಅಲ್ಲಿ ಪೂರ್ಣ ಪ್ರಮಾಣದಲ್ಲಿ ದೇವಸ್ಥಾನ ನಿರ್ಮಿಸಲಾಗುವುದು. ಮಥುರಾದಲ್ಲಿಯೂ ಅದೇ ಸ್ಥಿತಿ ಇದೆ. ಅಲ್ಲೂ ಪೂರ್ಣಪ್ರಮಾಣದಲ್ಲಿ ದೇವಾಲಯ ನಿರ್ಮಾಣವಾಗಲಿದೆ. ಸೋಮನಾಥ ದೇವಾಲಯ ಸೇರಿದಂತೆ ಎಲ್ಲ ಶ್ರದ್ಧಾ ಕೇಂದ್ರಗಳನ್ನೂ ಪೂರ್ಣ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಅಯೋಧ್ಯದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅವರಿಗೆ ಅವಕಾಶ ಸಿಕ್ಕಿದೆ. ಅಯೋಧ್ಯಯಲ್ಲಿ ಮಂದಿರ ಕಾಮಗಾರಿ ನೋಡಿ ಕಣ್ಣು ತುಂಬಿ ಬಂದಿದೆ. ಅದ್ಭುತ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

Join Whatsapp
Exit mobile version