APMC ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲ: ಶಿವಾನಂದ ಪಾಟೀಲ

Prasthutha|

ಬೆಂಗಳೂರು: ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ 4 ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ. ಸೋಯಾಬಿನ್ ಮತ್ತು ಉದ್ದಿನಕಾಳು ಖರೀದಿ ಪ್ರಕ್ರಿಯೆ ಆರಂಭಿಸಲು ಗುರುವಾರ (ಆ.5) ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.


ಈಗಾಗಲೇ ಹೆಸರುಕಾಳು ಮತ್ತು ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ರಾಜ್ಯ ಸರ್ಕಾರ ಖರೀದಿ ಏಜನ್ಸಿಗಳನ್ನು ನೇಮಕ ಮಾಡಿದೆ. ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಸೂರ್ಯಕಾಂತಿ ಮತ್ತು 10 ಕ್ವಿಂಟಲ್ ಹೆಸರುಕಾಳು ಖರೀದಿ ಮಾಡಲಿದೆ. ಎಫ್.ಎ.ಕ್ಯೂ (FAQ) ಗುಣಮಟ್ಟದ ಸೋಯಾಬಿನ್ ಗೆ ಕ್ವಿಂಟಲ್ ಗೆ 4,892 ರೂ. ಹಾಗೂ ಉದ್ದಿನ ಕಾಳಿಗೆ ಕ್ವಿಂಟಲ್ ಗೆ 7,400 ರೂ. ಬೆಲೆ ನಿಗದಿಪಡಿಸಲಾಗಿದೆ. ಬೆಂಬಲ ಬೆಲೆಯಲ್ಲಿ ಸುಮಾರು 10 ಲಕ್ಷ ಕ್ವಿಂಟಲ್ ಸೋಯಾಬಿನ್ ಮತ್ತು 2 ಲಕ್ಷ ಕ್ವಿಂಟಲ್ ಉದ್ದಿನಕಾಳು ಖರೀದಿ ಮಾಡಲಾಗುವುದು. 2024-25ನೇ ಸಾಲಿನಲ್ಲಿ 4.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 4.72 ಲಕ್ಷ ಮೆಟ್ರಿಕ್ ಟನ್ ಸೋಯಾಬಿನ್ ಹಾಗೂ 0.77 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 0.40 ಲಕ್ಷ ಮೆಟ್ರಿಕ್ ಟನ್ ಉದ್ದಿನಕಾಳು ಇಳುವರಿ ನಿರೀಕ್ಷೆ ಮಾಡಲಾಗಿತ್ತು ಎಂದು ತಿಳಿಸಿದರು.



Join Whatsapp