‘ಮುಸ್ಲಿಮರ 2ಬಿ ಮೀಸಲಾತಿ ಪುನರ್ ಸ್ಥಾಪಿಸಿ’ ಹ್ಯಾಷ್ ಟ್ಯಾಗ್ ಟ್ವಿಟರ್‌ನಲ್ಲಿ ಭಾರಿ ಟ್ರೆಂಡಿಂಗ್

Prasthutha|

ಬೆಂಗಳೂರು: ರಾಜ್ಯ BJP ಸರಕಾರವು ಮುಸ್ಲಿಮ್ ಪ್ರವರ್ಗಕ್ಕೆ ಸೇರಿದ 2ಬಿ ಮೀಸಲಾತಿಯನ್ನು ರದ್ದು ಗೊಳಿಸಿರುವುದನ್ನು ವಿರೋಧಿಸಿ ಹಾಗೂ ಮರುಸ್ಥಾಪಿಸುವಂತೆ ಒತ್ತಾಯಿಸಿ ಟ್ವಿಟ್ಟರ್ ಬಳಕೆದಾರರು ಅಭಿಯಾನವನ್ನು ಕೈಗೊಂಡಿದ್ದಾರೆ.

#Restore2BMuslimReservation(ಮುಸ್ಲಿಮರ 2ಬಿ ಮೀಸಲಾತಿ ಪುನರ್ ಸ್ಥಾಪಿಸಿ) ಎಂಬ ಹ್ಯಾಷ್ ಟ್ಯಾಗ್ ಟ್ವಿಟರ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ರಾಜ್ಯಾದ್ಯಂತ ಟಾಪ್ ಟ್ರೆಂಡಿಂಗ್ ಆಗಿದೆ.

- Advertisement -

ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಈ ಮೀಸಲಾತಿಯನ್ನು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಕ್ಕೆ ತಲಾ ಶೇ. 2ರಷ್ಟು ಹಂಚಿಕೆ ಮಾಡಲಾಗಿದ್ದು, ಸರಕಾರದ ಈ ನಡೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -