ಅಂತರಾಷ್ಟ್ರೀಯ ವಿಮಾನಗಳ ಹಾರಾಟ ನಿರ್ಬಂಧ | ಮೇ 31ರ ವರೆಗೆ ವಿಸ್ತರಣೆ

Prasthutha|

ಹೊಸದಿಲ್ಲಿ: ಕೊರೊನಾ ವೈರಸ್‌ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸಲು ಅಂತರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲೆ ವಿಧಿಸಿರುವ ನಿರ್ಬಂಧವನ್ನು ಮೇ 31ರ ವರೆಗೂ ವಿಸ್ತರಿಸಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಸುತ್ತೋಲೆ ಪ್ರಕಟಿಸಿದೆ.

- Advertisement -

ಭಾರತದಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸಂಚಾರವನ್ನು 2021ರ ಮೇ 31ರ ವರೆಗೂ ನಿರ್ಬಂಧಿಸಲಾಗಿದೆ. ಈ ನಿರ್ಬಂಧವು ಅಂತರರಾಷ್ಟ್ರೀಯ ಕಾರ್ಗೊ ವಿಮಾನಗಳ ಕಾರ್ಯಾಚರಣೆಗಳ ಮೇಲೆ ಹಾಗೂ ನಿರ್ದಿಷ್ಟವಾಗಿ ಡಿಜಿಸಿಎ ಅನುಮತಿ ನೀಡಿರುವ ವಿಮಾನಗಳ ಹಾರಾಟಕ್ಕೆ ಅನ್ವಯವಾಗುವುದಿಲ್ಲ.

‘ಈಗಾಗಲೇ ನಿಗದಿಯಾಗಿರುವ ಅಂತರರಾಷ್ಟ್ರೀಯ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಂಚರಿಸಲು ಅನುಮತಿ ನೀಡಬಹುದು’ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp