ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ; ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಕುಮ್ಮಕ್ಕು ನೀಡುತ್ತಿದೆ: ಯು.ಟಿ.ಖಾದರ್ ಆರೋಪ

Prasthutha|

ಬೆಂಗಳೂರು: ಮುಲ್ಕಿ ಸೇರಿದಂತೆ ಕೆಲವೆಡೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿರುವ ಬಗ್ಗೆ ಭಿತ್ತಿ ಪತ್ರಗಳನ್ನ ಹಾಕಲಾಗಿದೆ. ಇದೊಂದು ಅಸಹ್ಯ ಕೃತ್ಯ. ಇದಕ್ಕೆ ಹಿಂದೂ ಸಹೋದರರು ಬೆಂಬಲ ಕೊಡಬಾರದು.  ಬಿಜೆಪಿ ಸರ್ಕಾರ ಈ ವಿಚಾರವಾಗಿ ಮೌನವಾಗಿದ್ದು, ಒಳಗೊಳಗೆ ಖುಷಿ ಪಡುತ್ತಿದೆ. ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆರೋಪಿಸಿದರು.

- Advertisement -

ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರು ವ್ಯಾಪಾರ ನಡೆಸುವುದಕ್ಕೆ ಹಿಂದೂ ಸಂಘಟನೆಗಳ ವಿರೋಧಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು  ತಮ್ಮ ಅಸಮಾಧಾನ ಹೊರ ಹಾಕಿದರು.

 ಈ ಕುರಿತು ಮಾತನಾಡಿದ  ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ ಖಾದರ್ ಭಾರತ ದೇಶ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದೆ. ಇಲ್ಲಿ ಎಲ್ಲಾ ಧರ್ಮೀಯರು ಸಹಬಾಳ್ವೆಯಿಂದ ಬದುಕುತ್ತಿದ್ದಾರೆ. ಆದರೆ, ಕೆಲವರು ಧರ್ಮಗಳ ನಡುವೆ ಕಂದಕವನ್ನು ಸೃಷ್ಟಿಸುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಕೆಲ ಹಿತಾಸಕ್ತಿಗಳು ಭಿತ್ತಿ ಪತ್ರಗಳನ್ನು ಹಾಕುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ, ದ್ವೇಷ ಸೃಷ್ಟಿಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Join Whatsapp