Home ಟಾಪ್ ಸುದ್ದಿಗಳು ಪ್ರಚಾರಕ್ಕೆ ನಿರ್ಬಂಧ ಎಲ್ಲರಿಗೂ ಅನ್ವಯ, ಮೋದಿ ಮಾದರಿ ಆಗಬೇಕು: ಸಂಜಯ್ ರಾವುತ್

ಪ್ರಚಾರಕ್ಕೆ ನಿರ್ಬಂಧ ಎಲ್ಲರಿಗೂ ಅನ್ವಯ, ಮೋದಿ ಮಾದರಿ ಆಗಬೇಕು: ಸಂಜಯ್ ರಾವುತ್

ಮುಂಬೈ: ಕೊರೋನಾ ಹಿನ್ನೆಲೆಯಲ್ಲಿ ಪಂಚ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರ ಹಾಗೂ ರೋಡ್ ಶೋಗಳನ್ನು ಜನವರಿ 15ರವರೆಗೆ ನಿರ್ಬಂಧಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶೀವಸೇನಾ ಸಂಸದ ಸಂಜಯ್ ರಾವುತ್, ‘ಪ್ರಚಾರದ ಮೇಲೆ ನಿರ್ಬಂಧ ಹೇರಿರುವುದು ಎಲ್ಲರಿಗೂ ಒಂದೇ ರೀತಿ ಅನ್ವಯಿಸಬೇಕು. ಪ್ರಧಾನಿ ನರೇಂದ್ರ ಮೋದಿ ಮಾದರಿಯಾಗಬೇಕು’ ಎಂದು ಹೇಳಿದ್ದಾರೆ.

‘ಪಶ್ಚಿಮ ಬಂಗಾಳದ ಚುನಾವಣೆ ಸಮಯದಲ್ಲಿ ಕೋವಿಡ್ ಎರಡನೇ ಅಲೆ ಉತ್ತುಂಗದಲ್ಲಿತ್ತು. ಕೆಲವು ಪಕ್ಷಗಳ ನಾಯಕರು ವಿಶೇಷವಾಗಿ ಬಿಜೆಪಿ ಹಾಗೂ ಪ್ರಧಾನಿ ಮೋದಿ ಹೇಗೆ ಪ್ರಚಾರ ನಡೆಸಿದ್ದಾರೆ ಎಂಬುದನ್ನು ನಾವೆಲ್ಲ ನೋಡಿದ್ದೇವೆ. ಆದರೆ ಈ ಬಾರಿ ಪ್ರಧಾನಿ ಮಾದರಿ ಆಗಬೇಕು’ ಎಂದು ಹೇಳಿದರು.

Join Whatsapp
Exit mobile version