Home ಟಾಪ್ ಸುದ್ದಿಗಳು ಅಹಿತಕರ ಘಟನೆ ಮುನ್ಸೂಚನೆ: ಜಮ್ಮು- ಕಾಶ್ಮೀರದಲ್ಲಿ ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ

ಅಹಿತಕರ ಘಟನೆ ಮುನ್ಸೂಚನೆ: ಜಮ್ಮು- ಕಾಶ್ಮೀರದಲ್ಲಿ ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ

ಶ್ರೀನಗರ: ಜಮ್ಮು- ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ನಿಧನದ ಬಳಿಕ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯುವುದಕ್ಕಾಗಿ ಇಂಟರ್ನೆಟ್ ಸೇವೆಗಳನ್ನೂ ಸ್ಥಗಿತಗೊಳಿಸಲಾಗಿದೆ.

ಗಿಲಾನಿ ನಿಧನದ ನಂತರ ಅಂತ್ಯಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಶ್ಮೀರದ ಹಲವು ಕಡೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಮೊಬೈಲ್ -ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿತ್ತು. ನಂತರ, ಶುಕ್ರವಾರ ರಾತ್ರಿ ಈ ಸಂವಹನ ಸೇವೆಗಳನ್ನು ಪುನರ್ ಸ್ಥಾಪಿಸಲಾಗಿತ್ತು.

ಆದರೆ, ಅಹಿತಕರ ಘಟನೆ ನಡೆಯುವ ಸಾಧ್ಯತೆ ಕುರಿತು ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮೊಬೈಲ್, ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Join Whatsapp
Exit mobile version