ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ: ಬೆಂಗಳೂರು ಬೀದಿ ವ್ಯಾಪಾರಿಗಳು ಹೇಳಿದ್ದು ಹೀಗೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮರ ವ್ಯಾಪಾರವನ್ನು ದಾರ್ಮಿಕ ಕ್ಷೇತ್ರಗಳ ಜಾತ್ರೆಗಳಲ್ಲಿ ತಡಯುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಬೀದಿ ಬದಿಯ ವ್ಯಾಪಾರಸ್ಥರು ಬಲಪಂಥೀಯ ಸಂಘಟನೆಗಳು ರಾಜ್ಯದಲ್ಲಿ ಕೋಮುವಾದದ ವಿಷಬೀಜ ಬಿತ್ತಲು ಯತ್ನಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ..

- Advertisement -

ಕರ್ನಾಟಕದಲ್ಲಿ ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯದ ಮೇಲಿನ ಕೋಮು ದಾಳಿಯನ್ನು ಖಂಡಿಸಿರುವ ಬೀದಿ ವ್ಯಾಪಾರಿಗಳ ಸಂಘ ಮತ್ತು ಇತರ ಮಿತ್ರ ಸಂಘಟನೆಗಳ ಪದಾಧಿಕಾರಿಗಳು ವಿಶ್ವ ಹಿಂದೂ ಪರಿಷತ್ತು ದೇವಸ್ಥಾನದ ಆಡಳಿತ ಸಮಿತಿಗಳ ಮೇಲೆ ಒತ್ತಡ ಹೇರುತ್ತಿದೆ ಮತ್ತು ದೇವಸ್ಥಾನಗಳ ಜಾತ್ರೆಗಳು, ವಾರ್ಷಿಕ ಹಬ್ಬಗಳು ಮತ್ತು ಧಾರ್ಮಿಕ ಉತ್ಸವಗಳಲ್ಲಿ ಹಿಂದೂಯೇತರ ವ್ಯಾಪಾರಿಗಳು ಅಂಗಡಿಗಳನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರಕಾರವು ಸಂಘಪರಿವಾರದ ನಿಷೇಧದ ಬೇಡಿಕೆಗೆ ಒಪ್ಪಿಕೊಳ್ಳುತ್ತಿದೆ, ನಗರ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರಿಂದ ಬೀದಿಬದಿ ವ್ಯಾಪಾರಿಗಳು ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಅವರು, ಕಳೆದ ದಿನಗಳಿಂದ ಕೋಮು ಧ್ರುವೀಕರಣ ನಡೆಯುತ್ತಿದ್ದು, ಇದೀಗ ನಮ್ಮ ಮೇಲೆ ಪೂರ್ಣ ಪ್ರಮಾಣದಲ್ಲಿ ದಾಳಿ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp