ಭಾರತದೊಂದಿಗೆ ವ್ಯಾಪಾರ ಪುನಃಸ್ಥಾಪನೆ: ಪಾಕ್ ವಿದೇಶಾಂಗ ಸಚಿವರ ಮಹತ್ತರ ಹೇಳಿಕೆ

Prasthutha|

ನವದೆಹಲಿ: ಆಗಸ್ಟ್ 2019 ರಿಂದ ಸ್ಥಗಿತಗೊಂಡಿರುವ ಭಾರತದೊಂದಿಗಿನ ವ್ಯಾಪಾರ ಸಂಬಂಧಗಳನ್ನು ಪುನಃಸ್ಥಾಪಿಸುವುದನ್ನು ಪಾಕಿಸ್ತಾನ ಗಂಭೀರವಾಗಿ ಪರಿಗಣಿಸುತ್ತದೆ ಎಂದು ವಿದೇಶಾಂಗ ಸಚಿವ ಮುಹಮ್ಮದ್ ಇಶಾಕ್ ದಾರ್ ಹೇಳಿದ್ದಾರೆ.

- Advertisement -

ಬ್ರಸೆಲ್‌ನಲ್ಲಿ ಪರಮಾಣು ಶಕ್ತಿ ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಲಂಡನ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ದಾರ್ ಈ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಭಾರತದೊಂದಿಗೆ ವ್ಯಾಪಾರ ಚಟುವಟಿಕೆಗಳನ್ನು ಪುನರಾರಂಭಿಸಲು ಹಣದ ಕೊರತೆಯಿರುವ ಪಾಕಿಸ್ತಾನದ ವ್ಯಾಪಾರ ಸಮುದಾಯದ ಉತ್ಸುಕತೆಯನ್ನು ಅವರು ಪ್ರಸ್ತಾಪಿಸಿದ್ದಾರೆ.

- Advertisement -

ಪಾಕಿಸ್ತಾನದ ಉದ್ಯಮಿಗಳು ಭಾರತದೊಂದಿಗೆ ವ್ಯಾಪಾರವನ್ನು ಪುನರಾರಂಭಿಸಲು ಬಯಸುತ್ತಾರೆ ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ.

ಭಾರತ ಸರ್ಕಾರವು ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂದೆಗೆದುಕೊಂಡ ನಂತರ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಪಾಕಿಸ್ತಾನ ಮತ್ತು ಭಾರತ ನಡುವಿನ ರಾಜತಾಂತ್ರಿಕ ಸಂಬಂಧ ಕಡಿಮೆಯಾಗಿತ್ತು.

Join Whatsapp