ನಾಸೀರ್ ಹುಸೇನ್ ಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಪತ್ರ ಬರೆದ ನಿವೃತ್ತ ಅಧಿಕಾರಿಗಳು

Prasthutha|

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವವರೆಗೂ ರಾಜ್ಯಸಭೆ ಸದಸ್ಯರಾದ ನಾಸೀರ್ ಹುಸೇನ್ ಅವರಿಗೆ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಉಪರಾಷ್ಟ್ರಪತಿಗೆ ಮನವಿ ಮಾಡಿದ್ದಾರೆ.

- Advertisement -


ಈ ಸಂಬಂಧ ಅವರು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.


ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಪೂರ್ಣಗೊಳ್ಳುವವರೆಗೂ ನಾಸೀರ್ ಹುಸೇನ್ ಅವರಿಗೆ ಯಾವುದೇ ಕಾರಣಕ್ಕೂ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಅಧಿಕಾರಿಗಳು ಮನವಿ ಮಾಡಿದ್ದಾರೆ.



Join Whatsapp