Home ಟಾಪ್ ಸುದ್ದಿಗಳು ರಸ್ತೆ ಗುಂಡಿ ಬಳಿ ಕುಳಿತು ನಿವೃತ್ತ ಸರ್ಕಾರಿ ನೌಕರನ ಏಕಾಂಗಿ ಪ್ರತಿಭಟನೆ

ರಸ್ತೆ ಗುಂಡಿ ಬಳಿ ಕುಳಿತು ನಿವೃತ್ತ ಸರ್ಕಾರಿ ನೌಕರನ ಏಕಾಂಗಿ ಪ್ರತಿಭಟನೆ

ಕೋಲಾರ: ರಸ್ತೆ ಗುಂಡಿಗಳನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿ ಇಂದು ಬೆಳಗ್ಗೆ ನಿವೃತ್ತ ಸರ್ಕಾರಿ ನೌಕರರೊಬ್ಬರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ  ನಡೆದಿದೆ.

ನಗರದ ಗಾಂಧಿ ನಗರ ಮಾರ್ಗವಾಗಿ ಕೋಲಾರಮ್ಮನ ಕೆರೆ ಕಟ್ಟೆಯ ಬಳಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ಇದರಿಂದ ಬೇಸತ್ತ ನಿವೃತ್ತ ಸರ್ಕಾರಿ ನೌಕರ ನಾಗರಾಜ್ ಎಂಬುವರು ರಸ್ತೆ ಮಧ್ಯದಲ್ಲಿ ಕುಳಿತು ಏಕಾಂಗಿ ಪ್ರತಿಭಟನೆ ನಡೆಸಿದರು. 

ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ. ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಹಲವು ಬಾರಿ ಮನವಿ ನೀಡಿದರೂ ಸ್ಪಂದಿಸದೇ ಇರುವುದಕ್ಕೆ ಈ ರೀತಿಯ ಪ್ರತಿಭಟನೆಗೆ ಮುಂದಾಗಿರುವುದಾಗಿ ಅವರು ಹೇಳಿದರು.

Join Whatsapp
Exit mobile version