ಬೆಂಗಳೂರು: ಇತ್ರೀಚೆಗೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಪತ್ನಿ ವಾಣಿ ಶಿವರಾಮ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ಕ್ವೀನ್ಸ್ ರಸ್ತೆಯಲ್ಲಿರುವಂತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ವಾಣಿ ಶಿವರಾಮ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಮೂಲಕ ರಾಜಕಾರಣಿಯೂ ಆಗಿದ್ದ, ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ. ಶಿವರಾಮ್ ಪತ್ನಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದ್ದಾರೆ.
ಪತಿ ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ಆಸೆಯಂತೆ ರಾಜಕೀಯ ಪ್ರವೇಶದ ಸುಳಿವು ನೀಡಿದ್ದ ವಾಣಿ ಶಿವರಾಮ್ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದಾರೆ.